ವಿಜಯಪುರ: ಸಾರಿಗೆ ಇಲಾಖೆಯಲ್ಲಿ 8,000 ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು. 8 ಸಾವಿರ ಹೊಸ ಬಸ್ ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಯೋಜನೆಯಿಂದ ಅನುಕೂಲವಾಗಿದೆ. ಹೀಗಿದ್ದರೂ ಬಿಜೆಪಿ ನಾಯಕರು ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಮಹಿಳೆಯರ ಉಚಿತ ಪ್ರಯಾಣ ಸೇವೆ ಆರಂಭಿಸಿದ್ದರೂ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸರಿಯಾಗಿ ವೇತನ ಪಾವತಿಸುತಿದ್ದೇವೆ. ರದ್ದಾಗಿರುವ ಸಾರಿಗೆ ಸಂಚಾರ ಶೆಡ್ಯೂಲ್ ಪುನರಾರಂಭ ಅಗಲಿದ್ದು, ನಾಲ್ಕೈದು ತಿಂಗಳಲ್ಲಿ ರಾಜ್ಯದಲ್ಲಿ ಹೊಸ ಬಸ್ ಓಡಾಟ ಶುರುವಾಗಲಿದೆ ಎಂದು ತಿಳಿಸಿದ್ದಾರೆ.
5500 ಹೊಸ ಬಸ್ ಗಳನ್ನು ಖರೀದಿಸಲಾಗುತ್ತಿದೆ. 13,800 ಹೊಸ ಬಸ್ ಖರೀದಿಗೆ ಅನುಮತಿ ಕೇಳಲಾಗಿದ್ದು, 8,000 ಬಸ್ ಗಳ ಖರೀದಿಗೆ ಅನುಮತಿ ದೊರೆತಿದೆ. 13,888 ನೌಕರರು ನಿವೃತ್ತಿ ಹೊಂದಿದ್ದು, 8000 ಸಿಬ್ಬಂದಿ ನೇಮಕಾತಿ ಆಗಲಿದೆ. ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.