ಅಯೋಧ್ಯೆ : ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.”ಇಂದು ನಾನು ಭಗವಾನ್ ಶ್ರೀ ರಾಮನ ಕ್ಷಮೆಯಾಚಿಸುತ್ತೇನೆ. ನಮ್ಮ ಪ್ರಯತ್ನ, ತ್ಯಾಗ ಮತ್ತು ತಪಸ್ಸಿನಲ್ಲಿ ಏನೋ ಕೊರತೆ ಇರಬೇಕು, ನಾವು ಈ ಕೆಲಸವನ್ನು ಅನೇಕ ಶತಮಾನಗಳಿಂದ ಮಾಡಲು ಸಾಧ್ಯವಾಗಲಿಲ್ಲ. ಇಂದು ಇದು ನೆರವೇರಿದೆ. ಇಷ್ಟು ವರ್ಷಗಳ ಕಾಲ ನಾವು ಸಮಯ ತೆಗೆದುಕೊಂಡಿದ್ದಕ್ಕೆ ಕ್ಷಮೆಯಾಚಿಸುವೆ. ಪ್ರಭು ಶ್ರೀರಾಮನ ಆಗಮನದಿಂದ ಇಡೀ ದೇಶ ಸಂಭ್ರಮಗೊಂಡಿದೆ ಎಂದು ಮೋದಿ ಹೇಳಿದರು.