alex Certify ಪ್ರಚೋದನಾಕಾರಿ ಹೇಳಿಕೆ ನೀಡಿ ಭಾರತವನ್ನು ಕೆಣಕಿದ ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಚೋದನಾಕಾರಿ ಹೇಳಿಕೆ ನೀಡಿ ಭಾರತವನ್ನು ಕೆಣಕಿದ ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥ

ಇಸ್ಲಾಮಾಬಾದ್: ಪಾಕಿಸ್ತಾನ ನೂತನ ಸೇನಾ ಮುಖ್ಯಸ್ಥ ಆಸೀಂ ಮುನೀರ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.  ಶತ್ರುಗಳಿಗೆ ತಕ್ಕ ಉತ್ತರ ನೀಡಲು ನಾವು ಸಿದ್ದರಾಗಿದ್ದೇವೆ ಎಂದು ಭಾರತವನ್ನು ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥ ಕೆಣಕಿದ್ದಾರೆ

ಭಾರತ ದಾಳಿ ನಡೆಸಿದರೆ ನಾವು ಸಿದ್ದರಾಗಿದ್ದೇವೆ ಎಂದು ಆಸೀಂ ಮುನೀರ್ ಹೇಳಿದ್ದಾರೆ. ಇತ್ತೀಚೆಗೆ ಭಾರತದ ಸೇನಾಧಿಕಾರಿಯೊಬ್ಬರು ಪಾಕ್ ಆಕ್ರಮಿತ ಕಾಶ್ಮೀರ ವಶಕ್ಕೆ ನಾವು ಸಿದ್ಧ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ರೂಪದಲ್ಲಿ ಮಾತನಾಡಿದ ಆಸೀಂ ಮುನೀರ್ ಈ ರೀತಿ ಪ್ರತಿಕ್ರಿಯೆ ನೀಡಿದ್ದು, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಗಿಲ್ಗಿಟ್ ಸ್ತಾನದ ಬಗ್ಗೆ ಭಾರತದ ನಾಯಕರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಪಾಕಿಸ್ತಾನದ ಮೇಲೆ ಭಾರತ ದಾಳಿ ನಡೆಸಿದಲ್ಲಿ ನಾವು ಎದುರಿಸಲು ಸಿದ್ಧವಾಗಿದ್ದೇವೆ. ಪಾಕಿಸ್ತಾನ ಸೇನೆ ಸದಾ ಸನ್ನದ್ಧ ಸ್ಥಿತಿಯಲ್ಲಿ ಇರುತ್ತದೆ. ಭಾರತವನ್ನು ಎದುರಿಸಿ ಪಾಕಿಸ್ತಾನದ ಪ್ರತಿ ಇಂಚು ಜಾಗವನ್ನು ರಕ್ಷಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...