ಬೆಂಗಳೂರು : ಕರ್ನಾಟಕದಲ್ಲಿ ಹೊಸ ‘ಕೊರೊನಾ’ ತಳಿ ಧೃಡಪಟ್ಟಿಲ್ಲ, ಜೆಎನ್.1 ವೈರಸ್ ಬಗ್ಗೆ ನಿಗಾ ವಹಿಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಕರ್ನಾಟಕದಲ್ಲಿ ಹೊಸ ‘ಕೊರೊನಾ’ ತಳಿ ಧೃಡಪಟ್ಟಿಲ್ಲ , ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಶೀಗ್ರದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ತಾಂತ್ರಿಕ ಸಲಹ ಸಮಿತಿ ಕೆಲವು ಸಲಹೆಗಳನ್ನು ನೀಡಿದೆ ಅದನ್ನು ಜಾರಿಗೆ ತರಲಾಗುವುದು . ರಾಜ್ಯದಲ್ಲಿ ಕೊರೊನಾ ಟೆಸ್ಟಿಂಗ್ ಸಂಖ್ಯೆ ಹೆಚ್ಚಳ ಮಾಡುತ್ತೇವೆ. ಸಾರ್ವಜನಿಕರು ಕೋವಿಡ್ಗೆ ಕಡಿವಾಣ ಹಾಕಲು ಸ್ವಯಂ ಪ್ರೇರಿತವಾಗಿ ಮಾಸ್ಕ್ ಹಾಕಿಕೊಳ್ಳಿ ಎಂದರು.
ಇಂದು ಮಧ್ಯಾಹ್ನ 3 ಗಂಟೆಗೆ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಲಾಗುತ್ತದೆ, ನಂತರ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ನಿರ್ಧರಿಸಲಾಗುತ್ತದೆ. ಈಗಾಗಲೇ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಹೊಸ ಕೊರೊನಾ ತಳಿಯ ಆತಂಕ ಮನೆ ಮಾಡಿದೆ.