
ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದೆ. ಪ್ರಾಧಿಕಾರದ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮಲ್ಲೇಶ್ವರಂ ಮನೆಯಿಂದ ಶಾಂತಿನಗರದ ಇ.ಡಿ. ಕಚೇರಿಗೆ ನಟೇಶ್ ಅವರನ್ನು ಕರೆದುಕೊಂಡು ಬಂದು ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸತತ 36 ಗಂಟೆಗಳ ಕಾಲ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿವಿಧೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದ ಇ.ಡಿ. ಅಧಿಕಾರಿಗಳು ಮಹತ್ವದ ದಾಖಲೆ ವಶಕ್ಕೆ ಪಡೆದಿದ್ದಾರೆ. ಇದರ ಮುಂದುವರೆದ ಭಾಗವಾಗಿ ನಟೇಶ್ ಅವರನ್ನು ಕರೆತಂದು ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.