ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ. ಅಹಿತಕರ ಘಟನೆ ನಡೆಯದಂತೆ ಕಟ್ತೆಚ್ಚರ ವಹಿಸಲಾಗಿದೆ.
ನಗರದಾದ್ಯಂತ 7500 ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಹಲವೆಡೆ ಸೆನ್ಸ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮೊಬೈಕ್ ಕಮಾಂಡ್ ಹಾಗೂ ಅಂಟ್ರೋಲ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ಒಪೇರಾ ಜಂಕ್ಷನ್ ನಲ್ಲಿ ಪೊಲೀಸರು ಕಮಾಂಡ್ ವಾಹನ ನಿಲುಗಡೆ ಮಾಡಿದ್ದಾರೆ. ಪೊಲೀಸ್ ಕಂಟ್ರೋಲ್ ರೂಂ ಮಾದರಿಯಲ್ಲಿ ಕಾರ್ಯ ನಿರ್ವಹಿಸಲಿದೆ. ಹೆಜ್ಜೆ ಹೆಜ್ಜೆಗೂ ಭದ್ರತೆ ಕೈಗೊಳ್ಳಲಾಗಿದೆ.
ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಐಲ್ಯಾಂಡ್ ಗಳನ್ನು ನಿರ್ಮಿಸಲಾಗಿದೆ. ಮಹಿಳೆಯರು ಹಾಗೂ ಪುರುಷರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಸಂಜೆ ಮೇಲೆ ಬ್ರಿಗೇಡ್ ರೋಡ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅನೌನ್ಸ್ ಗಾಗಿ ಮೈಕ್ ಹಾಗೂ ಸ್ಪೀಕರ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಒಟ್ಟಾರೆ ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬೆಂಗಳೂರು ನಗರದಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ.