alex Certify GOOD NEWS: ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗುವವರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ತಡರಾತ್ರಿವರೆಗೂ ಹೆಚ್ಚುವರಿ BMTC ಬಸ್ ವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗುವವರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ತಡರಾತ್ರಿವರೆಗೂ ಹೆಚ್ಚುವರಿ BMTC ಬಸ್ ವ್ಯವಸ್ಥೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷವನ್ನು ಸ್ವಾಗತಿಸಲು ಸಿದ್ಧವಾಗಿದೆ. ಹೊಸ ವರ್ಷಾಚರಣೆಗೆ ಕೆಲವೇ ಗಂಟೆಗಳು ಬಾಕಿಯಿದ್ದು, ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವವರಿಗಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ.

ಹೊಸ ವರ್ಷ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬಸ್ ಗಳು ತಡರಾತ್ರಿ 2 ಗಂಟೆಯವರೆಗೆ ಸಂಚರಿಸಲಿವೆ. ಎಂಜಿ.ರೋಡ್, ಚರ್ಚ್ ಸ್ಟ್ರೀಟ್ ಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಇನ್ನು ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಮೆಟ್ರೋದಲ್ಲಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮದ್ಯಪಾನ ಮಾಡಿದ ಪ್ರಯಾಣಿಕರಿಗೆ ಮೆಟ್ರೋ ಪ್ರವೇಶ ನಿಷೇಧಿಸಲಾಗಿದೆ. ಅಸಭ್ಯವಾಗಿ ವರ್ತಿಸುವವರಿಗೆ ದಂಡ ವಿಧಿಸಲಾಗುತ್ತಿದೆ.

ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 13 ಸ್ಥಳಗಳಿಗೆ ಬಿಎಂಟಿಸಿ ಹೆಚ್ಚುವರಿ ಬಸ್ ಸಂಚರಿಸಲಿವೆ. ಎಂಜಿ.ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಜಿಗಣಿ, ಸರ್ಜಾಪುರ, ಕೆಂಗೇರಿ, ಜನಪ್ರಿಯ ಟೌನ್ ಶಿಪ್, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...