ಬೆಂಗಳೂರು: 2025 ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷ ಸ್ವಾಗತಿಸಲು ಸಜ್ಜಾಗಿದ್ದು, ಬ್ರಿಗೇಡ್ ರೋಡ್, ಎಂ.ಜಿ.ರೋಡ್, ಇಂದಿರಾನಗರ, ಕೋರಮಂಗಲ ಮೊದಲಾದ ಪ್ರಮುಖ ಸ್ಥಳಗಳಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಹೊಸ ವರ್ಷಾಚರಣೆಗೆ ಸಂಚಾರ ವ್ಯವಸ್ಥೆಗಳಲ್ಲಿ ಕೆಲ ಬದಲಾವಣೆಗಳಾಗಿವೆ.
ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ. ನಗರದ ಎಂ.ಜಿ.ರೋಡ್ ನಿಂದ ಬೆಂಗಳೂರು ನಗರದ 13 ಸ್ಥಳಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಡಿಸೆಂಬರ್ 31ರಂದು ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 2 ಗಂಟೆಯವರೆಗೆ ಬಿಎಂಟಿಸಿ ಬಸ್ ಗಳು ಸಂಚರಿಸಲಿವೆ. ಅಲ್ಲದೇ ನಮ್ಮ ಮೆಟ್ರೋ ಸೇವೆಯನ್ನು ವಿಸರಿಸಲಾಗಿದೆ. ಆದರೆ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಬಂದ್ ಆಗಲಿದೆ.
ಜನದಟ್ಟಣೆ ಇರುವ ಹಾಗೂ ಪ್ರಮುಖ ನಿಲ್ದಾಣಗಳಿಗೂ ಬಸ್ ವ್ಯವಸ್ಥೆ ಮಡಲಾಗುತ್ತಿದೆ. ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ, ಸೆಂಟ್ರಲ್ ಸಿಲ್ಕ್ ಬೋರ್ಡ್ ಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ