BIG NEWS: ಹೊಸ ವರ್ಷಾಚರಣೆ: ಕರ್ಕಶ ಶಬ್ಧವುಂಟುಮಾಡುವ ಪೀಪಿ, ವಿ-ಮಾಸ್ಕ್ ಬಳಸದಂತೆ ಕಮಿಷನರ್ ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷನಗಣನೆ ಆರಂಭವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಹೊಸ ವರ್ಷ ಬರಮಾಡಿಕೊಳ್ಳಲು ಜನರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದೇ ವೇಳೆ ಪೊಲೀಸರು ನಗರದೆಲ್ಲೆಡೆ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಕರ್ಕಶ ಶಬ್ಧಗಳ ಪೀಪಿ ಬಳಕೆ, ವಿ-ಮಾಸ್ಕ್ ಧರಿಸದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕಡಲೆಕಾಯಿ ಪರಿಷೆ ಸೇರಿದಂತೆ ಇತ್ತೀಚಿನ ಕೆಲ ಕಾರ್ಯಕ್ರಮಗಳಲ್ಲಿ ಕರ್ಕಶ ಶಬ್ಧವುಂಟುಮಾಡುವ ಪೀಪಿಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ಇದರಿಂದ ಇತರರಿಗೆ ಕಿರಿಕಿರಿಯುಂಟಾಗುತ್ತದೆ. ಅದೇರಿತಿ ಕೆಲ ಮಾಸ್ಕ್ ಗಳ ಧಾರಣೆ ಜನರನ್ನು ಭಯಭೀತರನ್ನಾಗಿಸುತ್ತದೆ. ವಿ-ಮಾಸ್ಕ್ ಧಾರಣೆ ಮಹಿಳೆಯರು, ಮಕ್ಕಳು ಸೇರಿದಂತೆ ಸಾರ್ವಜನಿಕರಲ್ಲಿ ಭಯದ ವಾತಾವರಣವುಂಟಾಗುವ ಸಾಧ್ಯತೆ ಇದೆ. ಅಲ್ಲದೇ ಮಾಸ್ಕ್ ಧಾರಣೆಯಿಂದ ಮುಖ ಚಹರೆ ಗುರುತಿಸಿವುದು ಕಷ್ಟ ಹಾಗಾಗಿ ವಿ- ಮಾಸ್ಕ್ ಧರಿಸುವಂತಿಲ್ಲ ಎಂದು ತಿಳಿಸಿದರು.

ಬೆಂಗಳೂರು ನಗರದಾದಂತ ಕಟ್ಟೆಚ್ಚರ ವಹಿಸಲಾಗಿದೆ. ಇಂದು ರಾತ್ರಿ ಎಲ್ಲಾ ಪೊಲೀಸ್ ಸಿಬ್ಬಂದಿಗಳು ಕರ್ತವ್ಯದಲ್ಲಿರಲಿದ್ದಾರೆ. ಗೃಹರಕ್ಷಕ, ಸಿವಿಲ್ ಡಿಫೆನ್ಸ್ ಸಿಬ್ಬಂದಿ ಸೇರಿದಂತೆ 11,830 ಜನ ಭದ್ರತೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read