ಬೆಂಗಳೂರು: ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗುವುದು. ಡಿಸೆಂಬರ್ 31 ರಂದು ಬೆಳಗ್ಗೆ 6 ರಿಂದ ಜನವರಿ 1 ರಂದು ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. 5 ಜನರು ಒಂದಾಗಿ ಸೇರುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ರಸ್ತೆಯಲ್ಲಿ ಹೊಸವರ್ಷಾಚರಣೆ ನಡೆಸುವಂತಿಲ್ಲ. ಬೆಂಗಳೂರಿನ ಹೊರ ಭಾಗದಲ್ಲಿಯೂ ಹೊಸವರ್ಷಕ್ಕೆ ನಿರ್ಬಂಧವಿದೆ. ಖಾಸಗಿ ಜಾಗದಲ್ಲಿ ಆಚರಿಸಿಕೊಳ್ಳಬಹುದು. ಬಾರ್, ಪಬ್, ಕ್ಲಬ್ ಗಳ ಬಂದ್ ಮಾಡಬೇಕಿದೆ. ಡ್ಯಾನ್ಸ್, ಮ್ಯೂಸಿಕ್ ಗೆ ಅವಕಾಶ ಇರುವುದಿಲ್ಲ. ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ದಿನ ನಿಷೇಧಾಜ್ಞೆ ಜಾರಿಯಾಗಲಿದ್ದು, ರಸ್ತೆಯಲ್ಲಿ ಹೊಸವರ್ಷಾಚರಣೆ ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಡಿಸೆಂಬರ್ 31 ರಂದು ಬೆಳಗ್ಗೆ 6 ರಿಂದ ಜನವರಿ 1 ರಂದು ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಹೇಳಲಾಗಿದೆ.