ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜಧಾನಿ ಬೆಂಗಳೂರು ನಗರದಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಬೆಂಗಳೂರು ನಗರದಲ್ಲಿ ಹೆಚ್ಚುವರಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಇಂದು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಬೆಂಗಳೂರು ಸಿಟಿ ರೌಂಡ್ಸ್ ಮೂಲಕ ಭದ್ರತಾ ಕಾರ್ಯ ಪರಿಶೀಲನೆ ನಡೆಸಲಿದ್ದಾರೆ. ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ.
ಬೆಂಗಳೂರಿನ ಪ್ರಮುಖ ಏರಿಯಾಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಸೇರಿ ಹಲವೆಡೆ ಹೆಚ್ಚುವರಿ ಪೊಲಿಸರನ್ನು ನಿಯೋಜಿಸಲಾಗಿದೆ. ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಖಾಕಿ ಕಣ್ಗಾವಲು ಹಾಕಲಾಗಿದೆ.