alex Certify BIG NEWS: ಹೊಸವರ್ಷಕ್ಕೆ ಹಸ್ತಲಾಘವ, ಆಲಿಂಗನ ನಿಷೇಧ; ಮಾರ್ಗಸೂಚಿ ಕಡ್ಡಾಯ ಪಾಲನೆಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸವರ್ಷಕ್ಕೆ ಹಸ್ತಲಾಘವ, ಆಲಿಂಗನ ನಿಷೇಧ; ಮಾರ್ಗಸೂಚಿ ಕಡ್ಡಾಯ ಪಾಲನೆಗೆ ಆದೇಶ

ಚಿತ್ರದುರ್ಗ: ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಹೊಸ ವರ್ಷ ಆಚರಿಸಲು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.

ಹೊಸ ವರ್ಷವನ್ನು ಅತ್ಯಂತ ಸರಳವಾಗಿ ಆಚರಿಸುವುದು ಸೂಕ್ತವಾಗಿದ್ದು, ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವುದು ಅವಶ್ಯವಾಗಿದೆ.

ಹಬ್ಬದ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ. 2020ರ ಡಿಸೆಂಬರ್ 30 ರಿಂದ 2021ರ ಜನವರಿ 2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ ವಿಶೇಷ ಡಿಜೆ ಡ್ಯಾನ್ಸ್ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿ ಇತ್ಯಾದಿ ನಿಷೇಧಿಸಿದೆ.

ಆದರೆ ಕ್ಲಬ್, ಪಬ್, ರೆಸ್ಟೋರೆಂಟ್‍ಗಳನ್ನು ಪ್ರತಿನಿತ್ಯದಂತೆ ತೆರೆದಿದ್ದು, ನಡೆಸಲು ನಿರ್ಬಂಧವಿಲ್ಲ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ, ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆಗಳ್ನು ಕೈಗೊಳ್ಳಲು ನಿರ್ಬಂಧವಿಲ್ಲ. ಆಯ್ದ ರಸ್ತೆಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಯುಕ್ತರು ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು.

65 ವರ್ಷ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್‍ಗಳು, ಮಾಲ್‍ಗಳು, ಪಬ್, ರೆಸ್ಟೋರೆಂಟ್‍ಗಳು ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಇರಿಸತಕ್ಕದ್ದು. ಹೋಟೆಲ್‍ಗಳು, ಮಾಲ್‍ಗಳು, ಪಬ್, ರೆಸ್ಟೋರೆಂಟ್‍ಗಳು ಹಾಗೂ ಅಂತಹ ಸ್ಥಳ, ಪ್ರದೇಶಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸರ್ಕಾರದ ಆದೇಶದಂತೆ ಕೋವಿಡ್-19ರ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರದಿಂದ ಜನರ ಸೇರಲು ಜಾಗ್ರತೆ ವಹಿಸುವುದು. ಅಗತ್ಯವಿದ್ದಲ್ಲಿ ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್‍ಲೈನ್ ಮುಖಾಂತರ ಟೋಕನ್ ಪದ್ದತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆಯನ್ನು ಕಲ್ಪಿಸುವುದು.

ಪ್ರಾಂಗಣಗಳಲ್ಲಿ ಉಪಹಾರ ಸ್ಥಳಗಳಲ್ಲಿ ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸತಕ್ಕದ್ದು. ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚತಕ್ಕದ್ದು. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ಹೇಳಲಾಗಿದೆ.

ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ನಗರಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾಗುವ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನಿನಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶದಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...