![](https://kannadadunia.com/wp-content/uploads/2022/12/new-year-758x455-1.jpg)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಾವಳಿ ಹೆಚ್ಚಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಡಿ.31 ರ ರಾತ್ರಿ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ನಗರ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಿದ್ದು, ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲು ಸೂಚನೆ ನೀಡಲಾಗಿದೆ.
ಹೊಸ ವರ್ಷಾಚರಣೆ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮಾರ್ಗಸೂಚಿ ಸಿದ್ಧ ಪಡಿಸಿದ್ದು, ಬೆಂಗಳೂರು ನಗರದಲ್ಲಿ ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸುವಂತೆ ಸೂಚನೆ ನೀಡಲಾಗಿದೆ.
ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಇರಲ್ಲ. ಬೆಂಗಳೂರಿನ ಪ್ರಮುಖ ಫ್ಲೈ ಓವರ್ ಗಳು ರಾತ್ರಿ ರಾತ್ರಿ 11 ಗಂಟೆ ಬಳಿಕ ಬಂದ್ ಆಗಲಿದೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ ಮಾಡಲು ಸೂಚನೆ ನೀಡಲಾಗಿದೆ.
ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಬಾರ್ ಮತ್ತು ಪಬ್‌ಗಳನ್ನು ರಾತ್ರಿ ಒಂದು ಗಂಟೆಗೆ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಲೌಡ್ ಸ್ಪೀಕರ್ ಬಳಕೆ, ಪಟಾಕಿ ಸಿಡಿಸಲು ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಿಎಂಟಿಸಿ ಬಸ್‌ಗಳ ಸಂಚಾರ ಇರಲಿದೆ. ರಾತ್ರಿ ಒಂದು ಗಂಟೆಯವರೆಗೆ ಮೆಟ್ರೊ ರೈಲು ಸಂಚಾರ ಇರುತ್ತದೆ