ಬೆಂಗಳೂರು: ನಿಯಮಾನುಸಾರ ಹೊಸ ವರ್ಷಾಚರಣೆ ಆಚರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಶೋಕಾಚರಣೆ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ, ಇದು ಸರ್ಕಾರಿ ಕಾರ್ಯಕ್ರಮಗಳಿಗೆ ಮತ್ರ ಅನ್ವಯವಾಗುತ್ತದೆ. ಖಾಸಗಿ ಕಾರ್ಯಕ್ರಮಗಳನ್ನು ನಿಯಮಾನುಸಾರ ಮಾಡಿಕೊಳ್ಳಿ ಎಂದರು.
ಹೋಟೆಲ್, ರೆಸಾರ್ಟ್ ಗಳಲ್ಲಿ ಹೊಸ ವರ್ಷಾಚರಣೆ ಮಾಡಿಕೊಳ್ಳಬಹುದು. ನಾವು ಬ್ಯುಸಿನೆಸ್ ಮಾಡುವವರಿಗೆ ಅಡ್ಡಿಪಡಿಸುವುದಿಲ್ಲ ಎಂದು ತಿಳಿಸಿದರು.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ 10,000 ಸಿಸಿಕ್ಯಾಮರಾ ಅಳವಡಿಸಲಾಗಿದೆ ಎಂದು ತಿಳಿಸಿದರು.