ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನ ಗ್ರೀನ್ ಸಂಸದೆಯೊಬ್ಬರು ಹೆರಿಗೆ ನೋವಲ್ಲೂ ಸೈಕಲ್ ತುಳಿದುಕೊಂಡು ಆಸ್ಪತ್ರೆಗೆ ತೆರಳಿ ಮಗುವಿಗೆ ಜನ್ಮ ನೀಡಿದ್ದಾರೆ.
ಸಂಸದೆ ಜೂಲಿ ಅನ್ನೆ ಜೆಂಟರ್ ಹಿಂದೆ ತಮ್ಮ ಮೊದಲ ಮಗುವಿನ ಹೆರಿಗೆಯ ಸಂದರ್ಭದಲ್ಲಿ ಇದೇ ರೀತಿ ಸೈಕಲ್ ನಲ್ಲಿ ಆಸ್ಪತ್ರೆಗೆ ತೆರಳಿದ್ದರು.
ಭಾನುವಾರ ಬೆಳಗಿನ ಜಾವ 2 ಗಂಟೆಗೆ ತಮ್ಮ ಹೆರಿಗೆ ನೋವು ಕಾಣಿಸಿಕೊಂಡಾಗ ಸೈಕಲ್ ನಲ್ಲಿ ಆಸ್ಪತ್ರೆಗೆ ಹೋದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇಂದು ನಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಆಗಮನವಾಗಿದೆ. ಹೆರಿಗೆ ನೋವು ಕಾಣಿಸಿಕೊಂಡಾಗ ಎರಡು ಗಂಟೆಯಾಗಿತ್ತು. ಆಸ್ಪತ್ರೆಗೆ ಸೈಕಲ್ ನಲ್ಲಿ ಹೋದೆ ಎಂದು ಸಂಸದೆ ಹೇಳಿಕೊಂಡಿದ್ದಾರೆ. ಆಕೆಯ ಈ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಕುಟುಂಬಕ್ಕೆ ಹೊಸ ಸದಸ್ಯನ ಆಗಮನಕ್ಕಾಗಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.