ಫೆಬ್ರವರಿ 19 ರಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪ್ರಾರಂಭವಾಗಲಿದ್ದು, ಭಾರತ ಸೇರಿದಂತೆ ಎಂಟು ತಂಡಗಳು ಹೋರಾಟ ನಡೆಸಲು ಸಜ್ಜಾಗಿವೆ. ನ್ಯೂಜಿಲ್ಯಾಂಡ್ ಕ್ರಿಕೆಟ್ ಬೋರ್ಡ್ 15 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಾಯಕ ಮಿಚೆಲ್ ಸ್ಯಾಂಟ್ನರ್ ಸೇರಿದಂತೆ ಬಲಿಷ್ಠ ಆಲ್ ರೌಂಡರ್ ಗಳು ಈ ತಂಡದಲ್ಲಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯಾ ಮೊಟ್ಟ ಮೊದಲ ಪಂದ್ಯದಲ್ಲೇ ನ್ಯೂಜಿಲ್ಯಾಂಡ್ ತಂಡ ಪಾಕಿಸ್ತಾನವನ್ನು ಎದುರಿಸಲಿದೆ.