ವಿಜಯಪುರ: ಕೆಲ ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ನಗರದ ಎಪಿಎಂಸಿ ಬಳಿ ನಡೆದಿದೆ.
ಕಣ್ಣೂರು ಗ್ರಾಮದ ತಿಪ್ಪಣ್ಣ ಹೊಸಮನಿ (34) ಹಾಗೂ ಸುಜಾತಾ(30) ಮೃತ ದಂಪತಿ. ತಿಪ್ಪಣ್ಣ ಹೊಸಮನಿ ಖಾಸಗಿ ವಾಹಿನಿಯಲ್ಲಿ ಕ್ಯಾಮರಾಮೆನ್ ಆಗಿ ಕೆಲಸ ಮಾಡುತ್ತಿದ್ದ. ತಿಪ್ಪಣ್ಣ ಹಾಗೂ ಸುಜಾತ ಪ್ರೀತಿಸಿ ವಿವಾಹವಾಗಿದ್ದರು.
20 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ಮುದ್ದೆಬಿಹಾಳದ ಎಪಿಎಂಸಿ ಬಳಿ ಮನೆಯಲ್ಲಿ ವಾಸವಾಗಿದ್ದರು. ಈಗ ಒಂದೇ ಮನೆಯಲ್ಲಿ ಅಕ್ಕಪಕ್ಕದ ಕೋಣೆಯಲ್ಲಿ ಇಬ್ಬರೂ ನೇಣಿಗೆ ಶರಣಾಗಿದ್ದಾರೆ. ಮುದ್ದೆಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವದಂಪತಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.