alex Certify ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಅಪಘಾತದಲ್ಲಿ ನವ ದಂಪತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಅಪಘಾತದಲ್ಲಿ ನವ ದಂಪತಿ ಸಾವು

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 16ರ ಗೋಳಾಂತರ ಬಳಿ ಸೋಮವಾರ ಈ ಘಟನೆ ನಡೆದಿದೆ. ಫೆಬ್ರವರಿ 11 ರಂದು ದಂಪತಿಯ ವಿವಾಹವಾಗಿತ್ತು. ಬರ್ಹಾಂಪುರಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರನ್ನು ಆಂಧ್ರಪ್ರದೇಶದ ಇಚ್ಚಾಪುರಂನ ಜಿ. ಬೇನು(27) ಮತ್ತು ಅವರ ಪತ್ನಿ ಪ್ರಣಿತಾ(22) ಎಂದು ಗುರುತಿಸಲಾಗಿದೆ.

ಮದುವೆ ನಂತರ ಸಂಪ್ರದಾಯದ ಪ್ರಕಾರ, ಅವರು ಬೆರ್ಹಾಂಪುರದ ಮಹಿಳೆಯ ನಿವಾಸಕ್ಕೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಗಂಜಾಂ ಜಿಲ್ಲೆಯ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಗೋಳಾಂತರ ಪೊಲೀಸ್ ಠಾಣೆ ಇನ್ಸ್‌ ಪೆಕ್ಟರ್ ಬಿಬೇಕಾನಂದ ಮಹಂತ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...