ನವದೆಹಲಿ: ದೇಶದಲ್ಲಿ ಎರಡು ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ ಎರಡೂ ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗಿವೆ. ಇದರ ಮಧ್ಯೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 9,216 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 391 ಮಂದಿ ಮೃತಪಟ್ಟಿದ್ದಾರೆ.
ಇನ್ನು ದೇಶದಲ್ಲಿ 99,976 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8,612 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,40,45,666 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ 24 ಗಂಟೆಯಲ್ಲಿ 73.67 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 1,25,75,05,514 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.