
ನವದೆಹಲಿ: ಹೆದ್ದಾರಿಗಳಲ್ಲಿ ಕಳಪೆ ಕಾಮಗಾರಿಯಿಂದ ಅಪಘಾತವಾದಲ್ಲಿ ಇಂಜಿನಿಯರ್ ಗಳು, ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನಿಸಿದೆ.
ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ತಾತ್ಕಾಲಿಕ ಪ್ರಮಾಣ ಪತ್ರ ವಿತರಣೆ ಪ್ರಕ್ರಿಯೆಯಲ್ಲಿ ಹೆದ್ದಾರಿ ಪ್ರಾಧಿಕಾರ, ಇಂಡಿಪೆಂಡೆಂಟ್ ಇಂಜಿನಿಯರ್, ಅಥಾರಿಟಿ ಆಫ್ ಇಂಜಿನಿಯರ್ ಪ್ರತಿನಿಧಿಗಳಿಂದ ಕರ್ತವ್ಯ ಉಂಟಾದಲ್ಲಿ, ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಾದಲ್ಲಿ ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಹೇಳಲಾಗಿದೆ.
ರಸ್ತೆಗಳಲ್ಲಿ ಸೈನ್ ಬೋರ್ಡ್ ಹಾಕಿರುವುದನ್ನು ತೋರಿಸಿ ಕಾಮಗಾರಿ ಪೂರ್ಣಗೊಂಡಿದೆ ಎಂದು ತಾತ್ಕಾಲಿಕ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ. ಇದರಿಂದ ಬಳಕೆದಾರರ ಸುರಕ್ಷತೆಯೊಂದಿಗೆ ರಾಜಿಯಾಗಿ ಪ್ರಾಧಿಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಕಾಮಗಾರಿ ಪೂರ್ಣಗೊಳಿಸಿದ ನಂತರ ತಾತ್ಕಾಲಿಕ ಪ್ರಮಾಣ ಪತ್ರ ವಿತರಿಸುವ ಮೊದಲು ಹೆದ್ದಾರಿ ಯೋಜನೆಯಲ್ಲಿ ರಸ್ತೆ ಸುರಕ್ಷತೆ ನಿಯಮಗಳನ್ನು ಪಾಲಿಸಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಸಂಭವಿಸಿದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಇಂಜಿನಿಯರ್ ಗಳನ್ನು ಜವಾಬ್ದಾರರನ್ನಾಗಿ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.