ಬೆಂಗಳೂರು: ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಟೋಲ್ ದರ ಹೆಚ್ಚಳ ಆದೇಶ ವಾಪಸ್ ಪಡೆಯಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ಏಪ್ರಿಲ್ 1 ರಿಂದ ಬೆಂಗಳೂರು -ಮೈಸೂರು ಹೆದ್ದಾರಿ ಟೋಲ್ ದರ ಶೇ. 22 ರಷ್ಟು ಹೆಚ್ಚಳ ಮಾಡಲಾಗಿತ್ತು. ಆದರೆ, ವಾಹನ ಸವಾರರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರ ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ದರ ಹೆಚ್ಚಳ ಆದೇಶವನ್ನು ಹಿಂಪಡೆದಿದೆ ಎಂದು ಹೇಳಲಾಗಿದೆ.