
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇಕಡ 15ರಷ್ಟು ಹೆಚ್ಚಿಸಿ ಆರೋಗ್ಯ ಇಲಾಖೆ ಆದೇಶಿಸಿದೆ.
ಪ್ರಸಕ್ತ ಸಾಲಿನ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ವೇತನ ಹೆಚ್ಚಳ ಜಾರಿಗೆ ಬರಲಿದೆ. ಈ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹೊರಗುತ್ತಿಗೆ ನೌಕರರ ಸಂಘದ ಬಹುದಿನಗಳ ಬೇಡಿಕೆ ಈಡೇರಿದೆ.
ರಾಜ್ಯದಾದ್ಯಂತ 16,847 ಸಿಬ್ಬಂದಿಗೆ ಪ್ರಯೋಜನವಾಗಲಿದೆ. 3 ರಿಂದ 5 ವರ್ಷ ಕಾರ್ಯ ನಿರ್ವಹಿಸಿದವರಿಗೆ ಶೇ. 5 ರಷ್ಟು, 5 -10 ವರ್ಷ ಸೇವೆ ಸಲ್ಲಿಸಿದವರಿಗೆ ಶೇಕಡ 10ರಷ್ಟು, 10 ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸಿದ ಗುತ್ತಿಗೆ ನೌಕರರಿಗೆ ಶೇಕಡ 15ರಷ್ಟು ವೇತನ ಹೆಚ್ಚಳ ಮಾಡಲಾಗಿದೆ.