ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಘೋಷಿಸಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ಮುಸಾವಿರ್ ಹುಸೇನ್ ಶಾಜೀಬ್ ಮತ್ತು ಅಬ್ದುಲ್ ಮತಿನ್ ಅಹಮದ್ ತಾಹಾ ಅವರ ಪತ್ತೆಗೆ ಸಹಕಾರಿ ಆಗುವ ಸುಳಿವು ಇದ್ದಲ್ಲಿ ಮಾಹಿತಿ ನೀಡುವಂತೆ ಎನ್ಐಎ ಮನವಿ ಮಾಡಿಕೊಂಡಿದೆ. ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿ ಇರಿಸಲಾಗುವುದು. 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಹೇಳಲಾಗಿದೆ.
ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಸಂಭವಿಸಿ ಹಲವರು ಗಾಯಗೊಂಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಎನ್ಐಎ ಪ್ರಮುಖ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು, ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದೆ ಎಂದು ತಿಳಿಸಲಾಗಿದೆ.