
ಬೆಂಗಳೂರು : ಭಯೋತ್ಪಾದನೆಗೆ ಸಂಚು ಆರೋಪದ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 44 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಎನ್ ಐಎ ಅಧಿಕಾರಿಗಳು ಅಬ್ಬಾಸ್ ಅಲಿ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಆದರೆ ಇದೀಗ ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಬ್ಬಾಸ್ ಅಲಿಯನ್ನ ವಶಕ್ಕೆ ಪಡೆದು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ಮತ್ತಷ್ಟು ವಿಚಾರಣೆಗಾಗಿ ಮತ್ತೆ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.