ಕೊಯಮತ್ತೂರಿನಲ್ಲಿ ಕಾರ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಎನ್ಐಎಗೆ ಹಸ್ತಾಂತರ ಮಾಡಲಾಗಿದೆ.
ತಮಿಳುನಾಡು ಪೊಲೀಸರು ಪ್ರಕರಣದ ತನಿಖೆಯನ್ನು ಎನ್ಐಎಗೆ ಹಸ್ತಾಂತರ ಮಾಡಿದ್ದಾರೆ. ಎಫ್ಐಆರ್ ದಾಖಲಿಸಿದ ಎನ್ಐಎ ತನಿಖೆ ಆರಂಭಿಸಿದೆ. ಕೊಯಮತ್ತೂರು ಕಾರ್ ಸ್ಫೋಟ ಪ್ರಕರಣದಲ್ಲಿ ಎನ್ಐಎ ಎಫ್ಐಆರ್ ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೊಂಡಿದೆ.
ಅ. 23 ರಂದು ಕಾರ್ ನಲ್ಲಿ ಸಂಭವಿಸಿದ ಕೊಯಮತ್ತೂರು ಎಲ್ಪಿಜಿ ಸಿಲಿಂಡರ್ ಸ್ಫೋಟದ ಬಗ್ಗೆ ತನಿಖೆ ನಡೆಸಲು ಗೃಹ ಸಚಿವಾಲಯದ(ಎಂಎಚ್ಎ) ಭಯೋತ್ಪಾದನೆ ನಿಗ್ರಹ ವಿಭಾಗ(ಸಿಟಿಸಿಆರ್) ಪ್ರಕರಣದ ತನಿಖೆಯನ್ನು ಪ್ರಾರಂಭಿಸಲು ಭಯೋತ್ಪಾದನಾ ನಿಗ್ರಹ ಸಂಸ್ಥೆಗೆ ಆದೇಶ ನೀಡಿದ ನಂತರ ಕೇಂದ್ರೀಯ ಸಂಸ್ಥೆ ಎಫ್ಐಆರ್ ದಾಖಲಿಸಿದೆ.
ಈ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಕರಣದಲ್ಲಿ ಎನ್ಐಎ ತನಿಖೆಗೆ ಶಿಫಾರಸು ಮಾಡಿದ್ದರು.