ಮಂಗಳೂರು: ದೇಶದ ಹಲವೆಡೆ ಎನ್.ಐ.ಎ. ಅಧಿಕಾರಿಗಳು ದಾಳಿ ಮಾಡಿದ್ದು, ಮಂಗಳೂರಿನಲ್ಲಿ ಎಸ್.ಡಿ.ಪಿ.ಐ. ಮತ್ತು ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್.ಡಿ.ಪಿ.ಐ. ಮತ್ತು ಪಿಎಫ್ಐ ಕಚೇರಿಗಳ ಮೇಲೆ ದಾಳಿ ಮಾಡಿರುವ ಎನ್ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಿ ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಸೋದರನ ಮನೆಯ ಮೇಲೆಯೂ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.