ಬೆಂಗಳೂರು: ರಾಜ್ಯದ ಹಲವೆಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯದಲ್ಲಿ ದಾಳಿ ನಡೆದಿದೆ. ಮೈಸೂರಿನಲ್ಲೂ ಪಿಎಫ್ಐ ಮುಖಂಡರ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಹುಬ್ಬಳ್ಳಿಯ ಪಿಎಫ್ಐ ಮುಖಂಡರ ಮನೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ನಿಷೇಧಿತ ಪಿಎಫ್ಐ ಮುಖಂಡರಿಗಾಗಿ ಎನ್ಐಎ ತಲಾಶ್ ನಡೆಸಿದೆ.
ಇನ್ನು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯಿತಿ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾ, ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಅವರನ್ನು ಇಂದು ಮುಂಜಾನೆ ಬೆಳ್ಳಾರೆ ನಿವಾಸದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ.