alex Certify ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಶಿವಮೊಗ್ಗದಲ್ಲಿ ಎನ್ಐಎ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಶಿವಮೊಗ್ಗದಲ್ಲಿ ಎನ್ಐಎ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಮಂಜುನಾಥ ಬಡಾವಣೆಯಲ್ಲಿರುವ ಉಜೇರ್ ಫರ್ಹಾನ್ ಬೇಗ್ ಮನೆಯ ಮೇಲೆ ದಾಳಿ ಮಾಡಲಾಗಿದೆ.

ಕುಕ್ಕರ್ ಬ್ಲಾಸ್ಟ್ ಆರೋಪಿ ಶಾರಿಕ್ ಜೊತೆಗೆ ಈತ ಸಂಪರ್ಕದಲ್ಲಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾನೆ. ಉಜೇರ್ ಮನೆಯಲ್ಲಿದ್ದ ಪೆನ್ ಡ್ರೈವ್, ಸಿಮ್ ಕಾರ್ಡ್, ಆಧಾರ್ ಕಾರ್ಡ್ ಸೇರಿದಂತೆ ಹಲವು ವಸ್ತುಗಳನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗ್ಗೆ ಅಧಿಕಾರಿಗಳು ಉಜೇರ್ ನನ್ನು ವಿಚಾರಣೆಗೆ ಒಳಪಡಿಸಿದ್ದರು. ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಉಜೇರ್ ವಿಚಾರಣೆ ನಡೆಸಲಾಗಿದ್ದು, ನಂತರ ನಿವಾಸದ ಮೇಲೆ ದಾಳಿ ಮಾಡಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...