BIG NEWS: ನಾಲ್ಕು ರಾಜ್ಯಗಳಲ್ಲಿ NIA ದಾಳಿ; 8 ಶಂಕಿತ ಉಗ್ರರ ಬಂಧನ

ನವದೆಹಲಿ: ನಾಲ್ಕು ರಾಜ್ಯಗಳಲ್ಲಿ 19 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳು 8 ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಅಮರಾವತಿ, ಮುಂಬೈ, ಪುಣೆ ಹಾಗೂ ಜಾರ್ಖಂಡ್, ದೆಹಲಿ, ಕರ್ನಾಟಕದ ಬಳ್ಳಾರಿ, ಬೆಂಗಳೂರು ಸೇರಿದಂತೆ 19 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಳಿಯಲ್ಲಿ ಐಸಿಸ್ ಜೊತೆ ನಂಟು ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ 8 ಉಗ್ರರನ್ನು ಬಂಧಿಸಿದ್ದಾರೆ.

ಈ ವೇಳೆ ಸ್ಫೋಟಕ ಕಚ್ಚಾ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು, ಭಯೋತ್ಪಾದನೆಗೆ ಸಂಚು ರೂಪಿಸಿದ್ದ ಕೆಲ ದಾಖಲೆಗಳು, ಸ್ಮಾರ್ಟ್ ಫೊನ್ ಗಳು, ಕೆಲ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿಯ ಶಂಕಿತ ಮಿನಾಜ್ ಸೇರಿದಂತೆ 8 ಶಂಕಿತರನ್ನು ಬಂಧಿಸಲಾಗಿದೆ.

ಬಂಧಿತರು ಕಚ್ಚಾ ವಸ್ತುಗಳನ್ನು ಬಳಸಿ ಐಇಡಿ ತಯಾರಿಸಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read