alex Certify BIG NEWS: ಶಂಕಿತ ಉಗ್ರನ ಬಂಧನ ಬೆನ್ನಲ್ಲೇ ಬೆಂಗಳೂರಿನಲ್ಲಿ ಮುಂದುವರೆದ NIA ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಂಕಿತ ಉಗ್ರನ ಬಂಧನ ಬೆನ್ನಲ್ಲೇ ಬೆಂಗಳೂರಿನಲ್ಲಿ ಮುಂದುವರೆದ NIA ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಶಂಕಿತ ಉಗ್ರ ಅಲಿ ಅಬ್ಬಾಸ್ ಬಂಧನ ಬೆನ್ನಲ್ಲೇ ಎನ್ ಐಎ ಅಧಿಕಾರಿಗಳು ಸರಣಿ ದಾಳಿ ಮುಂದುವರೆಸಿದ್ದು, ಇಂದು ಕೂಡ ಎನ್ ಐಎ ಅಧಿಕಾರಿಗಳಿಗಳಿಂದ ಹಲವೆಡೆ ದಾಳಿ ನಡೆದಿದೆ.

ಶಿವಾಜಿನಗರ, ಪುಲಕೇಶಿ ನಗರ, ಸುಲ್ತಾನ್ ಪಾಳ್ಯ, ಆರ್.ಟಿ.ನಗರ, ಜೆ.ಸಿ.ನಗರದ ಚನ್ನಪ್ಪ ಗಾರ್ಡನ್ ಸೇರಿಂದತೆ ಬೆಂಗಳೂರಿನ 20ಕ್ಕೂ ಹೆಚ್ಚು ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಡಿಸೆಂಬರ್ 9ರಂದು ಪುಲಕೇಶಿನಗರದಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್ ಎಂಬಾತನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದರು. ಈತ ಐಸಿಸ್ ಉಗ್ರರ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ಬಂಧಿಸಲಾಗಿದೆ. ಈತನ ಬಂಧನ ಬಳಿಕ ಬೆಂಗಳೂರಿನಲ್ಲಿ ವಿವಿಧ ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...