alex Certify BIG NEWS : ದಕ್ಷಿಣ ಕನ್ನಡ ಸೇರಿ ದೇಶದ 14 ಕಡೆ ‘NIA’ ದಾಳಿ, ಮಹತ್ವದ ದಾಖಲೆಗಳು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ದಕ್ಷಿಣ ಕನ್ನಡ ಸೇರಿ ದೇಶದ 14 ಕಡೆ ‘NIA’ ದಾಳಿ, ಮಹತ್ವದ ದಾಖಲೆಗಳು ವಶಕ್ಕೆ

ಬೆಂಗಳೂರು: ಕರ್ನಾಟಕ ಸೇರಿದಂತೆ 5 ರಾಜ್ಯಗಳ 14 ಕಡೆಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಪಿಎಫ್ ಐ ಹಾಗೂ ಇತರೆ ಸಂಘಟನೆಗಳು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಕರ್ನಾಟಕದ ದಕ್ಷಿಣ ಕನ್ನಡ, ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ. ಉಗ್ರ ಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆ ಭಾಗಿಯಾಗಿರುವ ಶಂಕೆ ಹಿನ್ನಲೆ ದಾಳಿ ನಡೆಸಲಾಗಿದೆ. ಭಾರತದ 2047ರ ಒಳಗೆ ಪಿಎಫ್ ಐ ಆರ್ಮಿ ಸ್ಥಾಪಿಸಲು ಮುಂದಾಗಿದ್ದ ಶಂಕೆ ಹಿನ್ನಲೆ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 5 ರಾಜ್ಯಗಳ 14 ಸ್ಥಳಗಳಲ್ಲಿ NIA ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲಾತಿಗಳನ್ನ ವಶಪಡಿಸಿಕೊಂಡಿದೆ.

ಕೆಲ ದಿನಗಳ ಹಿಂದೆ ಶಸ್ತ್ರಾಸ್ತ್ರ ತರಬೇತಿ, ಐರನ್ ರಾಡ್ಸ್, ಕತ್ತಿಗಳ ತರಬೇತಿ ನೀಡಿದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಕೆಲ ಪಿಎಫ್ ಐ ಏಜೆಂಟರನ್ನು ಎನ್ಐಎ ಬಂಧಿಸಿತ್ತು. ಈ ನಿಟ್ಟಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...