ಕೇರಳದಲ್ಲಿ NIA ಪ್ರಮುಖ ಕಾರ್ಯಾಚರಣೆ ನಡೆಸಿದೆ. PFI ನಾಯಕರ 56 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. ಈ ಮೂಲಕ ಕೇರಳದಲ್ಲಿ ಮತ್ತೊಮ್ಮೆ ಎನ್ಐಎ ಪ್ರಮುಖ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ ಸಂಘಟನೆ ಪಿಎಫ್ಐನ ಎರಡನೇ ಸಾಲಿನ ನಾಯಕರ ವಿರುದ್ಧ ದಾಳಿ ಸಂಘಟಿಸಿದೆ.
ಪಿಎಫ್ಐ ಮುಖಂಡರ 56 ಸ್ಥಳಗಳಲ್ಲಿ ಎನ್ಐಎ ದಾಳಿ ನಡೆಸುತ್ತಿದೆ. PFI ಅನ್ನು ನಿಷೇಧಿಸಿದಾಗಿನಿಂದ ED ಮತ್ತು NIA ಯ ತನಿಖೆ ಮುಂದುವರೆದಿದ್ದು, ಅದರ ಅನೇಕ ಕಾರ್ಯಕರ್ತರು ಕಂಬಿಗಳ ಹಿಂದೆ ಇದ್ದಾರೆ.
ಈ ವರ್ಷದ ಸೆಪ್ಟೆಂಬರ್ನಲ್ಲಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಐಎಸ್ಐಎಸ್ ನಂತಹ ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದೆ ಮತ್ತು ಕೋಮು ದ್ವೇಷವನ್ನು ಹರಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಐದು ವರ್ಷಗಳ ಕಾಲ ನಿಷೇಧಿಸಲಾಗಿದೆ.
PFI ಯ ಎಂಟು ಸಹವರ್ತಿ ಸಂಸ್ಥೆಳಾದ ರಿಹ್ಯಾಬ್ ಇಂಡಿಯಾ ಫೌಂಡೇಶನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ ಕೌನ್ಸಿಲ್, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್, ನ್ಯಾಷನಲ್ ವುಮೆನ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಅನ್ನು UAPA ಅಡಿಯಲ್ಲಿ ಹೆಸರಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ನಿಷೇಧಿಸಲಾದ ಸಂಸ್ಥೆಗಳು ಇವಾಗಿದ್ದು, ಉಗ್ರರ ಕೃತ್ಯಗಳಿಗೆ ಹಣದ ನೆರವು ನೀಡಿದ ಆರೋಪದ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ.