ಬೆಳಗಾವಿ: ನೈಸ್ ಸಂಸ್ಥೆಗೆ ಕರ್ನಾಟಕ ಕೈಗಾರಿಕ ಪ್ರದೇಶಾಭಿವೃಧ್ದಿ ಮಂಡಳಿ ನೀಡಿದ್ದ 554 ಎಕರೆ ಹೆಚ್ಚವರಿ ಜಮೀನನ್ನು ಶೀಘ್ರವಾಗಿ ಹಿಂಪಡೆಯುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಸದಸ್ಯ ಎಸ್. ಮುನಿರಾಜು ಗೌಡ ಪಿಎಂ ಕೇಳಿದ ಚುಕ್ಕೆಗುರಿತನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಎಂಐಸಿಪಿ ಯೋಜನೆಗಾಗಿ ಸ್ವಾಧೀನ ಪಡಿಸಿಕೊಳ್ಳಲಾದ ಜಮೀನುಗಳ ಪೈಕಿ 554 ಎಕರೆ ಹೆಚ್ಚುವರಿ ಜಮೀನುಗಳನ್ನು ಹಿಂಪಡೆಯುವ ಕುರಿತಂತೆ, ಹೆಚ್ಚುವರಿಯಾಗಿ ಸ್ವಾಧೀನಪಡಿಸಿಕೊಂಡಿರುವ ಜಮೀನುಗಳನ್ನು ಗುರುತಿಸಿ ವಿವರವಾದ ಮಾಹಿತಿ ಸಲ್ಲಿಸುವಂತೆ ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡ ( ದಕ್ಷಿಣ) ಇವರಿಗೆ ಪತ್ರದ ಮೂಲಕ ತಿಳಿಸಲಾಗಿದೆ ಎಂದರು.
ಸ್ಪಷ್ಟವಾದ ವರದಿ ಪಡೆದು ಹೆಚ್ಚುವರಿ ಭೂಮಿಯನ್ನು ಹಿಂಪಡೆಯಲು ನಿಯಮಾನುಸಾರ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಭೂಮಿ ಹಿಂಪಡೆದ ಬಳಿಕ ಯಾವ ಉದ್ದೇಶಕ್ಕೆ ಬಳಸಬೇಕು ಎಂಬುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.