ಬೆಂಗಳೂರು: ನೈಸ್ ರಸ್ತೆ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕುಮಾರಕೃಪಾ ಅತಿಥಿ ಗೃಹದಲ್ಲಿ ಮಂಗಳವಾರ ತಮ್ಮನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದ ಸೋಂಪುರ ಗ್ರಾಮದ ರೈತರ ನಿಯೋಗಕ್ಕೆ ಭರವಸೆ ನೀಡಿದ ಡಿ.ಕೆ. ಶಿವಕುಮಾರ್, ನೈಸ್ ರಸ್ತೆಗೆಂದು ತಮ್ಮ ಜಮೀನು ಕಳೆದುಕೊಂಡ ರೈತರಿಗೆ ನಿವೇಶನ ಕೊಡಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ನೈಸ್ ರಸ್ತೆಗೆ ಜಮೀನು ಸ್ವಾಧೀನ ಮಾಡಿಕೊಂಡು 23 ವರ್ಷಗಳಾಗಿದ್ದು, ಭೂಮಿಗೆ ಪರಿಹಾರ ನೀಡಲಾಗಿದೆ. ಆದರೆ, ನಿವೇಶನ ನೀಡುವ ಭರವಸೆ ಇದುವರೆಗೂ ಈಡೇರಿಲ್ಲ. ಅಧಿಕಾರಿಗಳು ಸರ್ಕಾರದಿಂದ ಅನುಮತಿ ದೊರೆತಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ನಿವೇಶನ ಕೊಡಿಸಬೇಕೆಂದು ರೈತರು ಮನವಿ ಮಾಡಿದ್ದಾರೆ.
ಇದಕ್ಕೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್, ಅಧಿಕಾರಿಗಳೊಂದಿಗೆ ಚರ್ಚಿಸಿದೆ. ಸುಪ್ರೀಂ ಕೋರ್ಟ್ ನಲ್ಲಿ ಕೆಐಎಡಿಬಿ ಕಾಯ್ದೆ, ಬಿಡಿಎ ಕಾಯ್ದೆಯಲ್ಲಿ ಹಳೆ ದರಕ್ಕೆ ಪರಿಹಾರ ನೀಡಬೇಕು ಎಂದು ಆದೇಶ ನೀಡಲಾಗಿದೆ. ಜಮೀನು ನೀಡಿದ ರೈತರಿಗೆ ನಿವೇಶನ ಕೊಡಿಸಲು ಕ್ರಮ ಕೈಗೊಳ್ಳುವುದಾಗಿ ಎಂದು ಭರವಸೆ ನೀಡಿದ್ದಾರೆ.