ನಿಫಾ ವೈರಸ್ ನಿಂದಾಗಿ ಕೋಯಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ ನಂತರ ಕೇರಳ ಸರ್ಕಾರ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ.
ನಿಫಾ ವೈರಸ್ ಗೆ ಇಬ್ಬರು ಬಲಿಯಾದ ಹಿನ್ನೆಲೆ ಕೋಜಿಕೋಡ್ ಜಿಲ್ಲೆಯ 7 ಗ್ರಾಮ ಪಂಚಾಯತಿಗಳನ್ನು ಕಂಟೋನ್ಮೆಂಟ್ ವಲಯಗಳೆಂದು ಘೋಷಣೆ ಮಾಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಾಲಾ-ಕಾಲೇಜುಗಳು. ಸರ್ಕಾರಿ ಕಚೇರಿ ಹಾಗೂ ಅಂಗನವಾಡಿ ಗಳನ್ನು ಕೆಲವು ದಿನದ ಮಟ್ಟಿಗೆ ಬಂದ್ ಮಾಡಲು ಸೂಚನೆ ನೀಡಲಾಗಿದೆ. ಹಾಗೆಯೇ ಕೆಲವು ದಿನಗಳ ತನಕ ಮಾಂಸ, ಮೀನು, ಮೊಟ್ಟೆಗಳನ್ನು ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ.
9 ವರ್ಷದ ಬಾಲಕ ಸೇರಿದಂತೆ ಇನ್ನೂ ಇಬ್ಬರಿಗೆ ನಿಫಾ ವೈರಸ್ ಸೋಂಕು ತಗುಲಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಕೋಯಿಕ್ಕೋಡ್ನಲ್ಲಿ ವರದಿಯಾದ ಎರಡು ಸಾವುಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್. ಜನರು ಜಾಗರೂಕರಾಗಿರಬೇಕು ಎಂದು ಮುಖ್ಯಮಂತ್ರಿ ಸಲಹೆ ನೀಡಿದರು ಮತ್ತು ಮೃತರೊಂದಿಗೆ ನಿಕಟ ಸಂಪರ್ಕದಲ್ಲಿದ್ದವರು ಚಿಕಿತ್ಸೆಯಲ್ಲಿರುವುದರಿಂದ ಚಿಂತಿಸುವ ಅಗತ್ಯವಿಲ್ಲ ಎಂದು ಹೇಳಿದರು.