ನವದೆಹಲಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪಟ್ಟಿ ಸಿದ್ಧಗೊಳಿಸಲಾಗಿತ್ತು. ಆದರೆ ಆ ಪಟ್ಟಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.
ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮರ್ ಸರಣಿ ಸಭೆ ನಡೆಸಿ ಅಂತಿಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ರವಾನಿಸಿದ್ದರು. ಆದರೆ ಹೈಕಮಾಂಡ್ ಸಿಎಂ ಹಾಗೂ ಡಿಸಿಎಂ ನೀಡಿದ್ದ ಪಟ್ಟಿಯನ್ನು ತಡೆಹಿಡಿದಿದೆ.
ಕಾರಣ ಮೊದಲ ಪಟ್ಟಿಯಲ್ಲಿ ಕೇವಲ ಶಾಸಕರ ಹೆಸರನ್ನು ನೋಡಿದ ರಾಹುಲ್ ಗಾಂಧಿ, ಕೇವಲ ಶಾಸಕರಿಗೆ ಮಾತ್ರ ಯಾಕೆ ಎಂದು ಪ್ರಶ್ನಿಸಿದ್ದಾರೆ. ಮೊದಲ ಪಟ್ಟಿಯಲ್ಲಿ ಕೆಲ ಕಾರ್ಯಕರ್ತರಿಗೂ ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಹೀಗಾಗಿ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಇನ್ನೂ ಒಂದು ವಾರ ವಿಲಂಬವಾಗುವ ಸಾಧ್ಯತೆ ಇದೆ.