
ಬೆಂಗಳೂರು: ಬೆಂಗಳೂರಿನಲ್ಲಿ ಮಧ್ಯರಾತ್ರಿ ಪಬ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಪಬ್ ಗಳ ಮೇಲೆ ದಾಳಿ ನಡೆಸಲಾಗಿದೆ.
ದಾಳಿ ವೇಳೆ ನೈಜೀರಿಯನ್ ಪ್ರಜೆಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನೈಜೀರಿಯನ್ ಗೆಳೆಯನನ್ನು ವಶಕ್ಕೆ ಪಡೆದಿದ್ದಕ್ಕೆ ನಾಗಾಲ್ಯಾಂಡ್ ಯುವತಿ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾಳೆ. ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾಳೆ. ಅಲ್ಲದೇ, ಮಹಿಳಾ ಪಿಎಸ್ಐ ಕೈ ಪರಚಿದ್ದಾಳೆ. ಮದ್ಯದ ನಶೆಯಲ್ಲಿದ್ದ ಯುವತಿ ಮುಂಜಾನೆವರೆಗೂ ಪೋಲಿಸ್ ಠಾಣೆಯಲ್ಲಿ ಹೈಡ್ರಾಮಾ ನಡೆಸಿದ್ದಾಳೆ.