alex Certify BREAKING NEWS: ತಡರಾತ್ರಿ ಬೆಂಗಳೂರಲ್ಲಿ ನೈಜಿರಿಯಾ ಪ್ರಜೆಗಳ ಅಟ್ಟಹಾಸ: ಪೊಲೀಸ್ ಸಿಬ್ಬಂದಿ ಮೇಲೆಯೇ ದಾಳಿ ಮಾಡಿ ತೀವ್ರ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತಡರಾತ್ರಿ ಬೆಂಗಳೂರಲ್ಲಿ ನೈಜಿರಿಯಾ ಪ್ರಜೆಗಳ ಅಟ್ಟಹಾಸ: ಪೊಲೀಸ್ ಸಿಬ್ಬಂದಿ ಮೇಲೆಯೇ ದಾಳಿ ಮಾಡಿ ತೀವ್ರ ಹಲ್ಲೆ

ಬೆಂಗಳೂರು: ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ಮಾಡಿದ್ದಾರೆ.

ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಳ್ಳಿಪುರದಲ್ಲಿ ಘಟನೆ ನಡೆದಿದ್ದು, ಸಿಸಿಬಿ ಇನ್ ಸ್ಪೆಕ್ಟರ್ ಸುಬ್ರಹ್ಮಣ್ಯ ಸ್ವಾಮಿ ಸೇರಿದಂತೆ 5ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮೇಲೆ ಗ್ಯಾಂಗ್ ಹಲ್ಲೆ ಮಾಡಿದೆ.

ಮಾವಳ್ಳಿಪುರದ ಮನೆಯೊಂದರಲ್ಲಿ ಡ್ರಗ್ಸ್ ಸೇವನೆ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಪರಿಶೀಲನೆಗೆ ತೆರಳಿದ್ದಾಗ ನೈಜೀರಿಯಾ ಪ್ರಜೆಗಳು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ಪೊಲೀಸರಿಗೆ ರಕ್ತ ಬರುವಂತೆ ಥಳಿಸಿದ್ದಾರೆ. ಕಲ್ಲು ತೂರಿ ಪೊಲೀಸ್ ವಾಹನಗಳನ್ನು ಹಾನಿಗೊಳಿಸಿದ್ದಾರೆ.

ಸಿಸಿಬಿ ಪೊಲೀಸರು, ಹೊಯ್ಸಳ ಸಿಬ್ಬಂದಿ ಮೇಲೆ ನೈಜಿರಿಯಾ ಪ್ರಜೆಗಳು ಹಲ್ಲೆ ಮಾಡಿದ್ದು, ಗಾಯಾಳು ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...