alex Certify BIG BREAKING: ನೈಟ್ ಕರ್ಫ್ಯೂ ಬಗ್ಗೆ ದಿಢೀರ್ ನಿರ್ಧಾರ ಬದಲಿಸಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನೈಟ್ ಕರ್ಫ್ಯೂ ಬಗ್ಗೆ ದಿಢೀರ್ ನಿರ್ಧಾರ ಬದಲಿಸಿದ ಸರ್ಕಾರ

ಬೆಂಗಳೂರು: ನೈಟ್ ಕರ್ಫ್ಯೂ ಇಂದು ರಾತ್ರಿಯಿಂದಲೇ ಜಾರಿಗೆ ಬರಲ್ಲ. ಬದಲಾಗಿ ನಾಳೆ ರಾತ್ರಿಯಿಂದ ನೈಟ್ ಕರ್ಫ್ಯೂ ಜಾರಿಯಾಗಲಿದೆ.

ರಾಜ್ಯ ಸರ್ಕಾರ ಇಂದು ರಾತ್ರಿಯ ಬದಲಿಗೆ ನಾಳೆಯಿಂದ ನೈಟ್ ಕರ್ಫ್ಯೂ ಜಾರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೊರೊನಾ ಸೋಂಕು ಹೆಚ್ಚಾಗಬಹುದು ಎಂಬ ಕಾರಣಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಇಂದು ರಾತ್ರಿಯಿಂದಲೇ ಜಾರಿಗೊಳಿಸುವುದಾಗಿ ಹೇಳಲಾಗಿತ್ತು.

ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ ಮಾಡುವುದಾಗಿ ಹೇಳಲಾಗಿತ್ತು. ಆದರೆ, ನಾಳೆಯಿಂದ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 10 ಗಂಟೆ ಬದಲಿಗೆ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಕ್ರಿಸ್ಮಸ್ ಪ್ರಾರ್ಥನೆಗೆ ಅವಕಾಶ ಇರುತ್ತದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...