ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾರ್ಗಸೂಚಿ ನಕಲಿಯಾಗಿದ್ದು, ಸರ್ಕಾರ ಆ ರೀತಿಯ ಯಾವುದೇ ಮಾರ್ಗಸೂಚಿ ಹೊರಡಿಸಿರುವುದಿಲ್ಲ.
ವಿಪಕ್ಷ ನಾಯಕರು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಇದ್ದು, ಸಭೆಯ ನಂತರ ಹೊಸ ಮಾರ್ಗಸೂಚಿ ಅಥವಾ ಹೊಸ ನಿಯಮಾವಳಿಗಳನ್ನು ಹೊರಡಿಸುವ ಬಗ್ಗೆ ಮುಖ್ಯಮಂತ್ರಿಗಳು ನಿರ್ದರಿಸಲಿದ್ದಾರೆ.
ರಾಜ್ಯ ಸರ್ಕಾರದಿಂದ ಯಾವುದೇ ಮಾರ್ಗಸೂಚಿ ಬಿಡುಗಡೆಯಾಗಿಲ್ಲ. ನಾಳೆ ಸರ್ವಪಕ್ಷ ಸಭೆ ಬಳಿಕ ಅಧಿಕೃತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುತ್ತದೆ. ಸರ್ವ ಪಕ್ಷದ ಸಭೆಯ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.