ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ.
ನಾಳೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಮೇ 3 ರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಅನಗತ್ಯವಾಗಿ ಯಾರೂ ಓಡಾಡುವಂತಿಲ್ಲ. ಬಸ್ ಗಳ ಸಂಚಾರಕ್ಕೆ ಅನುಮತಿ ಇರುವುದಿಲ್ಲ ಎಂದು ಹೇಳಲಾಗಿದೆ.
ಆದರೆ, ಸರ್ಕಾರದಿಂದ ಯಾವುದೇ ಮಾರ್ಗಸೂಚಿ ಪ್ರಕಟಿಸಿಲ್ಲ. ಈಗ ಹರಿದಾಡುತ್ತಿರುವುದು ನಕಲಿ ಮಾರ್ಗಸೂಚಿಯಾಗಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ನಾಳೆ ರಾತ್ರಿಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಮಸೀದಿ. ಮಂದಿರ. ಚರ್ಚ್, ಶಾಲೆ ಕಾಲೇಜುಗಳನ್ನು ಬಂದ್ ಮಾಡಲು ಸರ್ಕಾರ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ ಎಂದು ಹೇಳಲಾಗಿತ್ತು. ಆದರೆ, ಅದು ನಕಲಿ ಆದೇಶವಾಗಿದೆ.
ಗೈಡ್ಲೈನ್ಸ್ ಬಿಡುಗಡೆ ಮಾಡದಿದ್ದರೂ, ನಕಲಿ ಗೈಡ್ ಲೈನ್ ಹರಿದಾಡಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಹೆಸರಲ್ಲಿ ಕಳೆದ ವರ್ಷದ ಮಾರ್ಗಸೂಚಿಯನ್ನು ದಿನಾಂಕ ಬದಲಿಸಿ ಹರಿಬಿಡಲಾಗಿದೆ. ಸರ್ಕಾರದಿಂದ ಯಾವುದೇ ಮಾರ್ಗಸೂಚಿಯನ್ನು ಪ್ರಕಟಿಸಿಲ್ಲ ಎನ್ನಲಾಗಿದೆ.