ಅಹಮದಾಬಾದ್: ಗುಜರಾತ್ ನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಎರಡನೆಯ ಅಲೆ ಅಬ್ಬರಕ್ಕೆ ತತ್ತರಿಸಿದ ಗುಜರಾತ್ ನ 20 ನಗರಗಳಲ್ಲಿ ಇಂದಿನಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುವುದು.
ಕೋವಿಡ್-19 ನಿಯಂತ್ರಣದಲ್ಲಿಡಲು ಹೈಕೋರ್ಟ್ ಸೂಚನೆ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲ ಶನಿವಾರಗಳಂದು ಸರ್ಕಾರಿ ಕಚೇರಿ ಮುಚ್ಚುವಂತೆ ತಿಳಿಸಲಾಗಿದೆ.
ಮದುವೆ, ರಾಜಕೀಯ, ಧಾರ್ಮಿಕ ಸಮಾರಂಭಗಳಲ್ಲಿ ಜನ ಸೇರಲು ನಿರ್ಬಂಧ ಹೇರಲಾಗಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನಿಡಲಾಗಿದೆ.
ಅಹಮದಾಬಾದ್ ನಲ್ಲಿ ಪರಿಸ್ಥಿತಿ ಕೈ ಮೀರಿದ್ದು, ಲಾಕ್ಡೌನ್, ನೈಟ್ ಕರ್ಫ್ಯೂ ನಂತಹ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವುದು ಸೇರಿದಂತೆ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯನ್ಯಾಯಮೂರ್ತಿ ವಿಕ್ರಮ್ ನಾಥ್ ಹೇಳಿದ್ದಾರೆ. ಇದರ ಬೆನ್ನಲ್ಲೇ ನಿರ್ಬಂಧ ಜಾರಿಗೊಳಿಸಲಾಗಿದೆ ಎನ್ನಲಾಗಿದೆ.