ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನಿಷೇಧಾಜ್ಞೆ ತೆರವುಗೊಳಿಸಿ ಆದೇಶಿಸಿದ್ದಾರೆ.
ನಾಳೆ ರಾತ್ರಿ ಅಂಗಡಿ ಮುಂಗಟ್ಟುಗಳಿಗೆ ನಿರ್ಬಂಧ ಇರುವುದಿಲ್ಲ. ವಾಹನ ಸಂಚಾರಕ್ಕೂ ಯಾವುದೇ ನಿರ್ಬಂಧ ಇರುವುದಿಲ್ಲ. ಜಿಲ್ಲಾಡಳಿತ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಹಿಂಪಡೆದುಕೊಂಡಿದೆ. ಇನ್ನು ನೈಟ್ ಕರ್ಫ್ಯೂ ಹಿಂಪಡೆದುಕೊಂಡಿದ್ದರೂ ಜಿಲ್ಲಾದ್ಯಂತ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಆಗಸ್ಟ್ 8 ರಿಂದ 14ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ.