
ಶಿವಮೊಗ್ಗ: ನಗರದ ಕುವೆಂಪು ರಸ್ತೆಯ ಹೋಟೆಲ್ ಒಂದರಲ್ಲಿ ಮಹಿಳೆಯರು ರಾತ್ರಿ ಪಾರ್ಟಿ ಮಾಡುತ್ತಿರುವುದಾಗಿ ಆರೋಪಿಸಿ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ.
ಪಾರ್ಟಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿ ಮಹಿಳೆಯರನ್ನು ಹೋಟೆಲ್ ನಿಂದ ಹೊರಗೆ ಕಳುಹಿಸಿದ್ದಾರೆ. ಹೋಟೆಲ್ ನಲ್ಲಿ ಮಹಿಳೆಯರು ರಾತ್ರಿ ಪಾರ್ಟಿ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಪೊಲೀಸರೊಂದಿಗೆ ಹೋಟೆಲ್ ಗೆ ಬಂದು ಪಾರ್ಟಿ ನಿಲ್ಲಿಸುವಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಬಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ಒಂದು ವಾರ ಮೊದಲೇ ಮಹಿಳೆಯರ ನೈಟ್ ಪಾರ್ಟಿ ಕುರಿತಾಗಿ ಪೊಲೀಸರ ಗಮನಕ್ಕೆ ತರಲಾಗಿದ್ದು, ಮಲೆನಾಡು ಭಾಗದಲ್ಲಿ ಇಂತಹ ಪಾರ್ಟಿಗಳನ್ನು ನಡೆಸದಂತೆ ಮೊದಲೇ ತಿಳಿಸಿದ್ದೆವು. ಆದರೂ ಪಾರ್ಟಿ ಮಾಡಿದ್ದು, ಪೊಲೀಸ್ ಇಲಾಖೆ ಗಮನಕ್ಕೆ ತಂದು ಹೋಟೆಲ್ ಗೆ ಬಂದಿದ್ದೇವೆ. ಭಾರತೀಯ ಸಂಸ್ಕೃತಿಗೆ ಧಕ್ಕೆ ತರುವ ಪಾರ್ಟಿ ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ.