ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಬಗ್ಗೆ ಮಾಹಿತಿ ನೀಡಿ, ನಿಖಿಲ್ ಕುಮಾರಸ್ವಾಮಿ 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟಿಸಲು ನಿಖಿಲ್ ಕುಮಾರ್ ಕ್ರಮ ಕೈಗೊಂಡಿದ್ದಾರೆ. ಪಕ್ಷ ಸಂಘಟನೆಗೆ ಒತ್ತು ನೀಡಿದ್ದಾರೆ. ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.