ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ದೆಹಲಿಯಲ್ಲಿ ಗುರುವಾರ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಬಳಿಕ ಹೆಚ್.ಡಿ ಕುಮಾರಸ್ವಾಮಿ ಸುದ್ದಿಗಾರರ ಜೊತೆ ಮಾತನಾಡಿದರು.
ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸಲ್ಲ, ಆದರೆ 28 ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಾರೆ. ಈ ಬಗ್ಗೆ ಅವರೇ ಸ್ಪಷ್ಟಪಡಿಸಿದ್ದಾರೆ. ನನ್ನ ಸ್ಪರ್ಧೆ ಬಗ್ಗೆ ಪಕ್ಷದಲ್ಲಿ ಇನ್ನೂ ಕೂಡ ತೀರ್ಮಾನ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಕೆಲವರು ನಮ್ಮ ಮೇಲಿನ ಅಭಿಮಾನದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.