ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಟಿಸ್ಸಾ ಪ್ರದೇಶದಲ್ಲಿ ಖಾಸಗಿ ಬಸ್ 200 ಮೀಟರ್ ಆಳದ ಕಮರಿಗೆ ಉರುಳಿ ಬಿದ್ದು ಕನಿಷ್ಠ 9 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದಾರೆ.
ಚಂಬಾ ಜಿಲ್ಲಾಧಿಕಾರಿ ರಾಣಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಟಿಸ್ಸಾದಿಂದ ಚಂಬಾ ಕಡೆಗೆ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಎಂ ಜೈರಾಮ್ ಠಾಕೂರ್ ಹೇಳಿದ್ದಾರೆ.