ಮೂರು ದಿನಗಳ ಯಶಸ್ವಿ ಪ್ರದರ್ಶನ ಕಂಡಿದ್ದ ಚಿತ್ರ ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿತ್ತು. ಈ ಚಿತ್ರದ ಹಾಡುಗಳು ಯೂಟ್ಯೂಬ್ ನಲ್ಲಿ ಒಂದಕ್ಕಿಂತ ಒಂದು ಸೂಪರ್ ಡೂಪರ್ ಹಿಟ್ ಆಗಿದೆ. ಕೆ ಎಸ್ ಚಿತ್ರ ಧ್ವನಿಯಲ್ಲಿ ಮೂಡಿ ಬಂದಿರುವ ನಿನ್ನ ಹೆಗಲು ಎಂಬ ವಿಡಿಯೋ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೆ ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ ನೀಡಿದ್ದು, ಕವಿರಾಜ್ ಸಾಹಿತ್ಯ ಬರೆದಿದ್ದಾರೆ.
ಶ್ರೀನಿವಾಸ್ ರಾಜು ನಿರ್ದೇಶನದ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್, ಮಾಳ್ವಿಕಾ ನಾಯರ್ ಮತ್ತು ಶಾರಣ್ಯ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ವಿಜಯ್ ಈಶ್ವರ್ ಸಂಭಾಷಣೆ, ಹಾಗೂ ವೆಂಕಟರಾಮ್ ಪ್ರಸಾದ್ ಛಾಯಾಗ್ರಾಹಣವಿದೆ.