alex Certify BIG NEWS: ಶಂಕಿತ ನಿಫಾ ಸೋಂಕು ಕಂಡುಬಂದರೆ ಸ್ವ್ಯಾಬ್ ಟೆಸ್ಟ್; ರಾಜ್ಯದ ಗಡಿಭಾಗದಲ್ಲಿ ಕಟ್ಟೆಚ್ಚರ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಂಕಿತ ನಿಫಾ ಸೋಂಕು ಕಂಡುಬಂದರೆ ಸ್ವ್ಯಾಬ್ ಟೆಸ್ಟ್; ರಾಜ್ಯದ ಗಡಿಭಾಗದಲ್ಲಿ ಕಟ್ಟೆಚ್ಚರ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದಲ್ಲಿಯೂ ಆರೋಗ್ಯ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ರಾಜ್ಯದಲ್ಲಿ ಶಂಕಿತ ನಿಫಾ ವೈರಸ್ ಗಮನಕ್ಕೆ ಬಂದರೆ ಸ್ವ್ಯಾಬ್ ಟೆಸ್ಟ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ನಿಫಾ ವೈರಸ್ ಆತಂಕ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಮುಖವಾಗಿ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ. ರಾಜ್ಯದ ಕೇರಳದ ಗಡಿ ಭಾಗದಲ್ಲಿ ಅಕ್ಟೋಬರ್ 10ರವರೆಗೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಹೇಳಿದರು.

ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೆ ಯಾವುದೇ ಶಂಕಿತ ನಿಫಾ ವೈರಸ್ ಪತ್ತೆಯಾಗಿಲ್ಲ. ಆದಾಗ್ಯೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ಈ ನಾಲ್ಕು ಜಿಲ್ಲೆಗಳಲ್ಲಿ 20ಕ್ಕೂ ಹೆಚ್ಚು ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ. ಜ್ವರ, ಕೆಮ್ಮು ಹಾಗೂ ಇತರ ರೋಗ ಲಕ್ಷಣಗಳಿಂದ ಬಳಲುತ್ತಿರುವ 10,000ಕ್ಕೂ ಹೆಚ್ಚು ಜನರನ್ನು ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...