ಬೆಂಗಳೂರು: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡಬೇಕು. ಕೆಲವು ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಅದು ಆಗಿಲ್ಲ ಎಂದು ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕಾಗಿನೆಲೆ ಗುರುಪೀಠದ ನಿರಂಜನಾನಂದ ಪುರಿ ಶ್ರೀಗಳು ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲೆ ನಮಗೆ ನಂಬಿಕೆ ಇದೆ. ಅವರು ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಿದ್ದಾರೆ. ಒಂದು ವೇಳೆ ಮಾಡದಿದ್ದರೆ ದೊಡ್ಡ ಹೋರಾಟ ಮಾಡುತ್ತೇವೆ. ಭಾನುವಾರ ಬೃಹತ್ ಸಮಾವೇಶ ನಡೆಸುತ್ತೇವೆ. ಸಮಾವೇಶದಲ್ಲಿ ಸುಮಾರು ಹತ್ತು ಲಕ್ಷ ಜನ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.